ಸಂಭ್ರಮದ ಸಾರ್ವಜನಿಕ ಉತ್ಸವ ದಿನ ಮೇ ದಿನ : ಪಿಡಿಓ ಎಚ್ ವೈ ತಾಳಿಕೋಟಿ

ಸಂಭ್ರಮದ ಸಾರ್ವಜನಿಕ ಉತ್ಸವ ದಿನ ಮೇ ದಿನ : ಪಿಡಿಓ ಎಚ್ ವೈ ತಾಳಿಕೋಟಿ

ಹಳ್ಳೂರ : ವಿಶ್ವದ ಬಹಿತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ ಮೇ ದಿನ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಚ್ ವೈ ತಾಳಿಕೋಟಿ ಹೇಳಿದರು.

ಗ್ರಾಮದ ಗ್ರಾಪಂ ಆವರಣದಲ್ಲಿ ಅಯೋಜಿಸಲಾದ ಕಾರ್ಮಿಕ ದಿನಾಚಾರಣೆಯನ್ನು ಉದ್ದೇಶಿಸಿ ಮಾತನಾಡಿ, ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ 1ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಾಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೊರೋನಾ ವೈರಸ್ ಹಿನ್ನೆಲೆ ಅತಿ ಸರಳ ರೀತಿಯಲ್ಲಿ ದೇಶದ ತುಂಬೆಲ್ಲಾ ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಲ್ಲ ಕಾರ್ಮಿಕರಿಗೆ ಅಲ್ಪೋಪಹಾರ ನೀಡಿ, ಸರಳ ರೀತಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತ್ತು. ಗ್ರಾಪಂ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share
WhatsApp
Follow by Email