
ಗ್ರಾಮದ ಗ್ರಾಪಂ ಆವರಣದಲ್ಲಿ ಅಯೋಜಿಸಲಾದ ಕಾರ್ಮಿಕ ದಿನಾಚಾರಣೆಯನ್ನು ಉದ್ದೇಶಿಸಿ ಮಾತನಾಡಿ, ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ 1ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಾಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೊರೋನಾ ವೈರಸ್ ಹಿನ್ನೆಲೆ ಅತಿ ಸರಳ ರೀತಿಯಲ್ಲಿ ದೇಶದ ತುಂಬೆಲ್ಲಾ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಲ್ಲ ಕಾರ್ಮಿಕರಿಗೆ ಅಲ್ಪೋಪಹಾರ ನೀಡಿ, ಸರಳ ರೀತಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತ್ತು. ಗ್ರಾಪಂ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.