ಬ್ರೇಕಿಂಗ್ ನ್ಯೂಸ್ ಡೆಂಗಿ, ಚಿಕುಂಗುನ್ಯ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಿ 12/05/202012/05/20201 min read admin ಬೆಳಗಾವಿ: ಡೆಂಗಿ ಮತ್ತು ಚಿಕುಂಗುನ್ಯ ರೋಗಗಳು ಸಮುದಾಯದಲ್ಲಿ ಹರಡದಂತೆ ಮುಂಜಾಗ್ರತ ಕ್ರಮಗನ್ನು ಕೈಗೊಳ್ಳಬೇಕೇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಮೇ 16 ರಂದು ಡೆಂಗಿ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಮುಂಜಾಗ್ರತ ಕ್ರಮಗನ್ನು ಕೈಗೊಂಡು ಸಮುದಾಯಕ್ಕೆ ಡೆಂಗಿ ಮತ್ತು ಚಿಕುಂಗುನ್ಯಾ ಜ್ವರಗಳ ಬಗ್ಗೆ ಸಾರ್ವಜನಿಕರಿಗೆ ಸಂದೇಶ ನೀಡಬೇಕಾಗಿದೆ.ಡೆಂಗಿ ಮತ್ತು ಚಿಕುಂಗುನ್ಯ ರೋಗಗಳು ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳುಡೆಂಗಿ/ಚಿಕುAಗುನ್ಯಾ ವೈರಸ್‌ನಿಂದ ಉಂಟಾಗುವ ಜ್ವರವನ್ನು ರಕ್ತ ಪರೀಕ್ಷೆಯಿಂದ ಮಾತ್ರ ಪತ್ತೆಹಚ್ಚಬಹುದು. ಹಗಲಿನಲ್ಲಿ ಕಚ್ಚುವ ಸೋಂಕಿತ ಈಡೀಸ್ ಸೊಳ್ಳೆಗಳಿಂದ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತವೆ. ಈಡೀಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ ಆದ್ದರಿಂದ, ನಿಮ್ಮ ಮನೆಯಲ್ಲಿನ ತೋಟ್ಟಿ, ಬ್ಯಾರಲ್, ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಿ, ಪುನಃ ನೀರು ತುಂಬಿ ಮತ್ತು ಎಲ್ಲಾ ನೀರಿನ ಶೇಖರಣೆಗಳನ್ನು ಮುಚ್ಚಿಡಬೇಕು. ಮನೆ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಚವಾಗಿಡಬೇಕು. ಸೊಳ್ಳೆಗಳು ಕಚ್ಚದಂತೆ ಮೈ ತುಂಬಾ ಬಟ್ಟೆಧರಿಸಿ ಸೊಳ್ಳೆ ಪರದೆ, ಸೊಳ್ಳೆ ಬತ್ತಿ, ಮುಲಾಮು, ದ್ರಾವಣಗಳನ್ನು ಉಪಯೋಗಿಸಬೇಕು. ಡೆಂಗಿ/ ಚಿಕುಂಗುನ್ಯ ರೋಗಿಗಳು ತಪ್ಪದೇ ಸೊಳ್ಳೆಯ ಪರದೆಯನ್ನು ಉಪಯೋಗಿಸಬೇಕು. ರಕ್ತ ಪರೀಕ್ಷೆ ಮತ್ತು ಚಿಕಿತ್ಸೆಯು ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದ್ದು, ಇದರ ಲಾಭ ಪಡೆದುಕೊಳ್ಳಬೇಕು. ಈಡೀಸ್ ಲಾರ್ವಾ ಸಮೀಕ್ಷೆಗಾಗಿ ನಿಮ್ಮ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬಂದಿ ಹಾಗೂ ಆಶಾ ಸ್ವಯಂ ಸೇವಕರಿಗೆ ಸಹಕಾರ ನೀಡಿ ಅವರ ಸಲಹೆಗಳನ್ನು ಪಾಲಿಸಬೇಕು. ಜ್ವರದ ಲಕ್ಷಣಗಳು ಕಂಡುಬAದಲ್ಲಿ ನಿರ್ಲಕ್ಷಿಸದೆ ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 104 ಕ್ಕೆ ಸಂಪರ್ಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share