ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಿಂದ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ : ಕೆಎಂಎಫ್ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಿಂದ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ : ಕೆಎಂಎಫ್ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ಜಗತ್ತಿನಲ್ಲಿಯೇ ಮೂರನೇ ದೊಡ್ಡದಾದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಿಂದ ರೈತರು, ಶ್ರಮಿಕರು, ಬಡವರು ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಅನುಕೂಲವಾಗಲಿದ್ದು, ಇದರಿಂದ ಮುಂದೆ ಕಷ್ಟಕ್ಕೆ ನೆರವಾಗುವಂತಹ ಪ್ಯಾಕೇಜ್ ಇದಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಬುಧವಾರದಂದು ಸುದ್ಧಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು, ಕರೆ ನೀಡಿರುವ ಆತ್ಮ ನಿರ್ಭರ ಭಾರತ ಅಭಿಯಾನ ಸಮಸ್ತ ಭಾರತೀಯರ ಆತ್ಮ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದರು.
ಕೊರೋನಾ ವೈರಸ್ ಸಂಕಷ್ಟದಿಂದ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಪ್ರಧಾನಿಗಳು 20 ಲಕ್ಷ ಕೋಟಿ ರೂ. ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ಮೂಲಕ ಭಾರತವನ್ನು ಸದೃಢ ರಾಷ್ಟ್ರವನ್ನಾಗಿಸಲು ಹಾಗೂ ಸ್ವಾವಲಂಬತೆಯನ್ನು ಎತ್ತಿ ಹಿಡಿಯಲು ಇದು ಸಹಾಯಕವಾಗಿದೆ ಎಂದು ಹೇಳಿದರು.
ಕೊರೋನಾ ವೈರಸ್ ಇಡೀ ವಿಶ್ವವನ್ನೇ ವ್ಯಾಪಿಸಿದ್ದು ನಾಶಮಾಡಲು ಹೊರಟಿದೆ. ಇಂತಹ ಸಾಂಕ್ರಾಮಿಕ ರೋಗವನ್ನು ಹೊಡೆದೋಡಿಸಲು ಒಗ್ಗಟ್ಟಿನ ಹೋರಾಟ ಅವಶ್ಯವಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕೊರೋನಾ ವಿರುದ್ಧ ಹೋರಾಟಕ್ಕೆ ಅಣಿಯಾಗಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ಕೊರೋನಾ ಸಮರದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎಲ್ಲರಿಗಿದೆ ಎಂದು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
Share
WhatsApp
Follow by Email