ಬ್ರೇಕಿಂಗ್ ನ್ಯೂಸ್ ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಅಕ್ರಮವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸಿದರೆ ಕ್ರಿಮಿನಲ್ ಮೊಕದ್ದಮೆ 14/05/202014/05/20201 min read admin ಬೆಳಗಾವಿ : ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಸೂಕ್ತ ಅನುಮತಿಪತ್ರ(ಇ-ಪಾಸ್) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನುಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡುಬಂದಿದ್ದು, ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಸಿದ್ದಾರೆ.ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನುಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಬೇಕು.ಹಾಗೆ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅನಿವಾರ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. Share