ಬ್ರೇಕಿಂಗ್ ನ್ಯೂಸ್ ಚನ್ನಮ್ಮ ಕಿತ್ತೂರಿನಲ್ಲಿ ನಡೆದ ಸಭೆಯಲ್ಲಿ ಶಾಸಕ ಮಹಾಂತೇಶ ದೊಡಗೌಡರ ಅವರಿಗೆ ಮನವಿ 15/05/202015/05/20201 min read admin ಚನ್ನಮ್ಮನ ಕಿತ್ತೂರು ಃ ವೈದ್ಯಗೆ ಜೀವ ಬೆದರಿಕೆ ಪ್ರಕರಣದ ಹಿಂದೆ ಇಬ್ಬರು ವೈದ್ಯರ ಕುಮ್ಮಕ್ಕು ಇರುವುದು ಕಂಡು ಬಂದಿದೆ, ಇಲಾಖಾಧಿಕಾರಿಗಳು ತಪ್ಪಿತಸ್ಥರ ಮೇಲೆ ಕಟ್ಟು ನಿಟ್ಟಿನ ಕ್ರಮ ಪ್ರಕಟಿಸಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಆಗ್ರಹಿಸಿದರು.ವೈದ್ಯೆಗೆ ಜೀವ ಬೆದರಿಕೆ ಖಂಡಿಸಿ ಕಿತ್ತೂರು ಬಂದ್ ಹಿನ್ನೆಲೆ ನಡೆದ ಸಭೆಯಲ್ಲಿ ಮಾತನಾಡಿ, ಅವರು ಈ ಘಟನೆಗೆ ಸಂಬAಧಿಸಿದAತೆ ವೈದ್ಯೆ ಮನನೊಂದು ರಾಜೀನಾಮೆಗೆ ಮುಂದಾಗಿದ್ದರು, ಆದರೇ ಅವರಿಗೆ ದೈರ್ಯ ತುಂಬುವ ಮೂಲಕ ರಾಜಿನಾಮೆ ನೀಡದಂತೆ ಮನವೊಲಿಸಲಾಯಿತು, ಈ ಘಟನೆಯನ್ನು ಕಿತ್ತೂರು ನಾಡಿನ ಜನರು ಖಂಡಿಸಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಿರುವುದು ಸಮಾಜಘಾತುಕರಿಗೆ ಎಚ್ಚರಿಕೆಯಾಗಿದೆ ಎಂದರು.ಇAತಹ ಘಟನೆಗಳಿಗೆ ಸಂಬAಧಿಸಿದAತೆ ನೌಕರರು ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ, ನಮ್ಮ ಕಾರ್ಯ ಪಡೆ ನಿಮ್ಮ ಜೊತೆ ಸದಾ ಇರುತ್ತದೆ. ಈ ಪ್ರಕರಣವನ್ನು ಪೊಲೀಸ್ ಅಧಿಕಾರಿಗಳು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.ಇಂತಹ ದುಷ್ಕೃತ್ಯ ಮಾಡುವ ಸಮಾಜಘಾತುಕ ಶಕ್ತಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವದಿಲ್ಲ, ಇಂತಹ ರೌಡಿಸಂ ಮಾಡುವ ವ್ಯಕ್ತಿಗಳನ್ನು ಮಟ್ಟಹಾಕಬೇಕು, ಈ ಘಟನೆಯಲ್ಲಿ ಪ್ರಚೋದನೆ ನೀಡಿದವರ ಮೇಲೆ ಕಠಿಣ ಶಿಕ್ಷೆಯಾಗಬೇಕು, ಆರೋಗ್ಯ ಇಲಾಖೆಯ ಜಿಲ್ಲಾ ವೈದ್ಯಾಧಿಕಾರಿ ದೌರ್ಜನ್ಯಕ್ಕೊಳಗಾದ ವೈದ್ಯರ ಬೆಂಬಲಕ್ಕೆ ಪ್ರಾಮಾಣಿಕವಾಗಿ ನಿಲ್ಲಬೇಕು, ಈ ಘಟನೆಯಿಂದ ಕಿತ್ತೂರಿಗೆ ಕಪ್ಪು ಚುಕ್ಕೆ ಉಂಟಾಗಿದೆ, ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕೆಂದು ಸಂದೀಪ ದೇಶಪಾಂಡೆ, ಬಸವರಾಜ ಪರವಣ್ಣವರ, ಮಲ್ಲಣ್ಣ ಸಾಣಿಕೊಪ್ಪ, ವಿ.ಡಿ.ಉಣಕಲ್ಲಕರ, ಮೊಹನ ಅಂಗಡಿ, ಜಗದೀಶ ಬಿಕ್ಕಣ್ಣವರ, ಹನುಮಂತ ಲಂಗೋಟಿ, ಮಹಾದೇವಿ ಮಣವಡ್ಡರ, ಡಾ. ಮಂಜುನಾಥ ಮುದಕನಗೌಡರ, ಎಸ್.ಪಿ.ಹಿರೇಮಠ ಸೇರಿದಂತೆ ಇತರರು ಆಗ್ರಹಿಸಿದರು.ಹಿರಿಯ ಆರೋಗ್ಯಾಧಿಕಾರಿ. ಐ.ಪಿ.ಗಡಾದ, ತಹಶೀಲ್ದಾರ ಪ್ರವೀಣ ಜೈನ್, ತಾಪಂ ಇಒ ಸುಭಾಸ ಸಂಪಗಾoವಿ, ಸಿಪಿಐ ಶ್ರೀಕಾಂತ ತೋಟಗಿ, ಟಿಎಚ್ಒ ಎಸ್.ಎಸ್.ಶಿದ್ದಣ್ಣವರ, ಎಸ್.ಸಿ.ಮಾಸ್ತಿಹೊಳಿ ಹಾಜರಿದ್ದರು. Share