
ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂಬ ಕಳವಳಕ್ಕೆ ಕಾರಣವಾಗಿದೆ. ಈಗಾಗಲೇ ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ಸಂಚಾರದ ಜೊತೆಗೆ ಟ್ಯಾಕ್ಸಿ-ಆಟೋ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಸೇರಿದಂತೆ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕೆಲವರು ಸರಿಯಾಗಿ ಪಾಲಿಸುತ್ತಿಲ್ಲವೆಂಬ ಸಂಗತಿ ಬಹಿರಂಗವಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಮೇ 25 ರಿಂದ ದೇಶಿಯ ವಿಮಾನ ಸಂಚಾರ ಆರಂಭವಾಗಲಿದ್ದು, ಜೂನ್ 1 ರಿಂದ 200 ರೈಲುಗಳ ಓಡಾಟಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ
ಹೀಗಾಗಿ ಮುಂದಿನ ದಿನಗಳಲ್ಲೂ ಕೊರೊನಾ ಮತ್ತಷ್ಟು ವ್ಯಾಪಿಸಲಿದೆ ಎನ್ನಲಾಗುತ್ತಿದ್ದು, ಸಾರ್ವಜನಿಕರು ಜಾಗ್ರತೆ ವಹಿಸಬೇಕಾಗಿರುವುದು ಅನಿವಾರ್ಯವಾಗಿದೆ. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ.