ಸಹಾಯಧನಕ್ಕೆ ಚಾಲಕರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರು

ಸಹಾಯಧನಕ್ಕೆ ಚಾಲಕರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರು

ಬೆಂಗಳೂರು: ಆಟೋ-ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ 5 ಸಾವಿರ ರೂ. ಸಹಾಯಧನ ಪಡೆಯಲು ಸೇವಾಸಿಂಧು ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಸಾರಿಗೆ ಇಲಾಖೆ ಸೂಚಿಸಿದೆ.
ಸಹಾಯಧನಕ್ಕಾಗಿ ಸೇವಾಸಿಂಧು ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಾರಿಗೆ ಇಲಾಖೆ ಈ ಹಿಂದೆಯೇ ತಿಳಿಸಿತ್ತು. ಆದರೆ, ವೆಬ್​ಪೋರ್ಟಲ್​ನಲ್ಲಿ ಅದಕ್ಕೆ ಪೂರಕ ಅವಕಾಶ ಕಲ್ಪಿಸಿರಲಿಲ್ಲ. ಇದೀಗ ವೆಬ್​ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಬೇಕಾದ ಲಿಂಕ್ ಅಭಿವೃದ್ಧಿಪಡಿಸಲಾಗಿದೆ. ಫಲಾನುಭವಿಗಳು https://sevasindhu.karnataka.gov.in/ ವೆಬ್​ಪೋರ್ಟಲ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅದಾದ ನಂತರ ಅರ್ಜಿ ಪರಿಶೀಲಿಸಿ, ಅರ್ಹ ಚಾಲಕರ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುವುದು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಕೆ ಸಂದರ್ಭ ಯಾವುದಾದ ಗೊಂದಲಗಳಿದ್ದರೆ, 080-22236698 ಕರೆ ಮಾಡುವಂತೆ ಸೂಚಿಸಲಾಗಿದೆ.
Share
WhatsApp
Follow by Email