ಬ್ರೇಕಿಂಗ್ ನ್ಯೂಸ್ ಕೊರೊನಾ; ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 3,041 ಪ್ರಕರಣಗಳು ಪತ್ತೆ 25/05/202025/05/2020 admin ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 3,041 ಪ್ರಕರಣಗಳು ಪತ್ತೆಯಾಗಿದ್ದು, 58 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 3,041 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಈ ಮೂಲಕ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿಯೇ 1,635 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಇನ್ನು ಪುಣೆಯಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ 5 ಸಾವಿರ ದಾಟಿದ್ದರೆ. 251 ಮಂದಿ ಸಾವನ್ನಪ್ಪಿದ್ದಾರೆ. ನಾಸಿಕ್ ನಲ್ಲಿ 1,570, ಲಾತೂರ್ ನಲ್ಲಿ 1,570, ಕೊಲ್ಹಾಪುರದಲ್ಲಿ 504 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ Share