ಸವದತ್ತಿ : ರಸ್ತೆ ಕಾಮಗಾರಿ ವೀಕ್ಷಿಸಿದ ಮಾಮನಿ

ಸವದತ್ತಿ : ರಸ್ತೆ ಕಾಮಗಾರಿ ವೀಕ್ಷಿಸಿದ ಮಾಮನಿ


ಸವದತ್ತಿ : ಲಾಕ್‌ಡೌನ್ ಸಡಿಲಿಕೆಯಾದ ಹಿನ್ನೆಲೆ ಪಟ್ಟಣದಲ್ಲಿ ರಸ್ತೆ ಮತ್ತು ವಿವಿಧ ಕಾಮಗಾರಿಗಳನ್ನು ಪ್ರಾರಂಭಿಸಿದ್ದು ಆದಷ್ಟು ಬೇಗನೇ ಪೂರ್ಣಗೊಳಿಸಬೇಕೆಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.
ಪಟ್ಟಣದ ಕಟಕೋಳ ಬ್ಯಾಂಕ್ ಸರ್ಕಲ್‌ನಲ್ಲಿನ ನಡೆದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಸಂಚರಿಸುವ ಪ್ರಮುಖ ರಸ್ತೆ ಇದಾಗಿದ್ದರಿಂದ ಕಾಮಗಾರಿಯಲ್ಲಿ ಗುಣಮಟ್ಟತೆ ಕಾಯ್ದುಕೊಂಡು ಆದಷ್ಟು ಬೇಗನೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಸಾರ್ವಜನಿಕರು ಸಹಕರಿಸಬೇಕೆಂದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ, ಪುರಸಭೆ ಅಭಿಯಂತರೆ ನಿರ್ಮಲಾ ನಾಯಕ, ಶಿವು ಮೆಟ್ಟಿನ ಇತರರು ಇದ್ದರು
Share
WhatsApp
Follow by Email