ಬ್ರೇಕಿಂಗ್ ನ್ಯೂಸ್ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಮೇಲುಸೇತುವೆ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ 27/08/202027/08/2020 admin ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಬೆಂಗಳೂರಿನ ಹೃದಯಭಾಗದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ, ಆನಂದರಾವ್ ವೃತ್ತದ ಬಳಿ ನಾಮಕರಣಗೊಂಡಿರುವ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಮೇಲುಸೇತುವೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ ಸಿ.ಎನ್.ಅಶ್ವತ್ಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಶಾಸಕ ದಿನೇಶ್ ಗುಂಡೂರಾವ್, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. Share