
ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.
ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪುರಸಭೆಗೆ ಅನೇಕ ಸಲ ಪತ್ರಿಕೆಗಳ ಮೂಲಕ ಪ್ರಕಟಣೆ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನರು ಪುರಸಭೆಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಪಟ್ಟಣದ ಬಸ್ ನಿಲ್ದಾಣ ರಸ್ತೆ, ಬಸವೇಶ್ವರ್ ವೃತ್ತ, ಅಂಬೇಡ್ಕರ್ ನಗರ, ಮಹಾತ್ಮ ಗಾಂಧಿ ವೃತ್ತ, ಹೀಗೆ ಪಟ್ಟಣದ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಪುರಸಭೆ ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯ ವಹಿಸಿದೆ.
ಸಚಿನ್ ಪತ್ತಾರ ಪತ್ರಕರ್ತರು : ಪ್ರತಿದಿನ ಬೆಳಗ್ಗೆ ಪತ್ರಿಕೆಗಳನ್ನು ಹಂಚುವಾಗ ಅನೇಕ ಬಾರಿ ನಾಯಿಗಳು ನನ್ನನ್ನು ಅಟ್ಟಿಸಿಕೊಂಡು ಬಂದು ಕಚ್ಚಿವೆ, ಇದರ ಬಗ್ಗೆ ಸಾಕಷ್ಟು ಸಾರಿ ಪುರಸಭೆ ಅಧಿಕಾರಿಗಳಿಗೆ ಹೇಳಿದರು. ಬೀದಿನಾಯಿಗಳ ನಿಯಂತ್ರಣ ಮಾಡಲು ಪುರಸಭೆ ಅಧಿಕಾರಿಗಳು ಯಾವುದೇ ತರದ ಕ್ರಮಕೈಗೊಳ್ಳಲು ವಿಫಲರಾಗಿದ್ದಾರೆ.