ಬೆಂಗಳೂರಿನ ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಕ್ಯೂ’ ನಿಲ್ಲಬೇಕಾಗಿಲ್ಲ! ಬಂದಿದೆ ಹೊಸ ವಿಧಾನ

ಬೆಂಗಳೂರಿನ ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಕ್ಯೂ’ ನಿಲ್ಲಬೇಕಾಗಿಲ್ಲ! ಬಂದಿದೆ ಹೊಸ ವಿಧಾನ

ಬೆಂಗಳೂರಿನಲ್ಲಿ ಜನರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೀಟಿ ಪಡೆದುಕೊಳ್ಳುವುದಕ್ಕಾಗಿ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಅದರ ಬದಲಿಗೆ ಆನ್‌ಲೈನ್‌ ಮೂಲಕವೇ ವೈದ್ಯರ ಭೇಟಿಗೆ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇಂಥದೊಂದು ವ್ಯವಸ್ಥೆ ಜಾರಿಗೊಳಿಸುವುದಾಗಿ ಸ್ವತಃ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್, ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ತಗ್ಗಿಸಲು ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್‌ ಹೆಸರು ನೋಂದಣಿ ಹಾಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಜಾರಿಗೆ ತರಲಾಗುವುದು. ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವೈದ್ಯರಿಗಾಗಿ ಬೆಂಗಳೂರಿಗರು ಕ್ಯೂ ನಿಲ್ಲಬೇಕಾಗಿಲ್ಲಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನ ಸಂಖ್ಯೆ ಕಡಿಮೆ ಮಾಡಬೇಕಿದೆ. ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಈ ಆಸ್ಪತ್ರೆಯಲ್ಲಿ ಜನರ ಕ್ಯೂ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ವೈದ್ಯರ ಸಮಯ ನಿಗದಿ, ಯಾವ ವೈದ್ಯರು ಎಂಬ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶದ ಮೂಲಕ ಕಳುಹಿಸಲಾಗುತ್ತದೆ. ತಮಗೆ ನಿಗದಿಪಡಿಸಿರುವ ಸಮಯಕ್ಕೂ ಪೂರ್ವದಲ್ಲಿ ಯಾರೂ ಆಸ್ಪತ್ರೆಗೆ ಬಂದು ಕಾಯುವ ಅಗತ್ಯ ಇರುವುದಿಲ್ಲ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮೊದಲೇ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಇದರ ಜೊತೆಗೆ ಡಿಜಿಟಲ್‌ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು.

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 51 ಹಾಸಿಗೆಗಳ ಐಸಿಯು ಇದ್ದು, ಕೋವಿಡ್ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100ಕ್ಕೆ ಏರಿಸಬೇಕು. ಅದೇ ರೀತಿ ಸಭೆ ನಡೆಸುವ ಮೂಲಕ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಹೇಳಿದ್ದಾರೆ.

ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನಜಯನಗರ ಆಸ್ಪತ್ರೆಯ ಚಿಕಿತ್ಸೆಯಲ್ಲಿ ಲೋಪವಿರುವ ಬಗ್ಗೆ ಸಾರ್ವಜನಿಕರು ಯಾವುದೇ ದೂರು ನೀಡಿಲ್ಲ. ಐದು ವರ್ಷದಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಆಸ್ಪತ್ರೆಯಲ್ಲಿ ಚಾವಣಿ ಸೇರಿದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಈ ಹಿನ್ನೆಲೆ ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುತ್ತದೆ ಎಂದು ಸಚಿವರು ಹೇಳಿದರು.

Share
WhatsApp
Follow by Email