ರಮ್ಯಾ ಈಗ ನಿರ್ಮಾಪಕಿ ಆಗಲಿದ್ದಾರೆ. ತಮ್ಮ ಬೆಸ್ಟ್ ಫ್ಯಾನ್ಸ್  ಗೆ ಥಾಂಕ್ಸ್ ಹೇಳಿದ್ದಾರೆ!

ರಮ್ಯಾ ಈಗ ನಿರ್ಮಾಪಕಿ ಆಗಲಿದ್ದಾರೆ. ತಮ್ಮ ಬೆಸ್ಟ್ ಫ್ಯಾನ್ಸ್ ಗೆ ಥಾಂಕ್ಸ್ ಹೇಳಿದ್ದಾರೆ!

ರಮ್ಯಾ/ ದಿವ್ಯ ಸ್ಪಂದನ

ಬೆಂಗಳೂರು: ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮುಂಬರುವ ಯೋಜನೆಗಳನ್ನು ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ‘ಸಿಹಿ ಸುದ್ದಿ’ಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟೂಡಿಯೋಸ್’ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ರಮ್ಯಾ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಟ್ವಿಟ್ಟರ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ ನೋಡಿ…

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್‌ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮೆರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ಸದಾ ನನಗೆ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.

‘ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳಲು ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗಾಗಿ ಸಿನಿಮಾ ಹಾಗೂ ವೆಬ್‌ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟೂಡಿಯೋಸ್ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ’ ಎಂದಿದ್ದಾರೆ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾ ವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ‘ನನ್ನ ಪ್ರೀತಿಯ ಅಭಿಮಾನಿಗಳಿಗೆ‘ ಹೃತ್ಪೂರ್ವಕ ವಂದನೆಗಳು.

ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.ಇದರ ಜೊತೆಗೆ ವಿಜಯ ಕಿರಗಂದೂರ್, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು. ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ ಕೃತಜ್ಞತೆಗಳೊಂದಿಗೆ ರಮ್ಯಾ’ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

Share

Leave a Reply

Your email address will not be published.

WhatsApp
Follow by Email