KPSC Recruitment: ಕೆಪಿಎಸ್​ಸಿ ಗ್ರೂಪ್​ ಸಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್​ 13 ವಿಸ್ತರಣೆ

KPSC Recruitment: ಕೆಪಿಎಸ್​ಸಿ ಗ್ರೂಪ್​ ಸಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಸೆಪ್ಟೆಂಬರ್​ 13 ವಿಸ್ತರಣೆ

ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission) ಗ್ರೂಪ್​ ಸಿ (Group C) ಹುದ್ದೆಗಳ ಭರ್ತಿಗೆ ನೇಮಕಾತಿ ಅವಧಿ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ. ಕೆಪಿಎಸ್​ಸಿ ಆರ್ಧಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ (Assistant Statistical Officer) ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಸೆಪ್ಟೆಂಬರ್​ 30ರವರೆಗೆ ವಿಸ್ತರಿಸೆ.

ಈ ಹಿಂದೆ ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್​​ 30 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿತ್ತು. ಈ ಹುದ್ದೆಗೆ ಈಗ ಅವಧಿ ವಿಸ್ತರಣೆ ಮಾಡಿರುವ ಹಿನ್ನಲೆ ಆಸಕ್ತ ಮತ್ತು ಸೂಕ್ತ ಅರ್ಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇನ್ನು ಹೆಚ್ಚಿನ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಶೈಕ್ಷಣಿಕ ಅರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಗಣಿತಶಾಸ್ತ್ರ, ಶುದ್ಧ ಗಣಿತ, ಅಂಕಿಅಂಶ, ಅನ್ವಯಿಕ ಅಂಕಿಅಂಶಗಳು, ಅಂಕಿಅಂಶಗಳು/ಕ್ವಾಂಟಿಟೇಟಿವ್ ಟೆಕ್ನಿಕ್ಸ್‌ನೊಂದಿಗೆ ಅರ್ಥಶಾಸ್ತ್ರ, ಶುದ್ಧ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ,ಮಾನ್ಯತೆ ಪಡೆದ ಗಣಿತಶಾಸ್ತ್ರದ ಯಾವುದೇ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳು: 05 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಭ್ಯರ್ಥಿಗಳು: 03 ವರ್ಷಗಳು

ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು.

ಅರ್ಜಿ ಶುಲ್ಕ:

ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ, ವಿಕಲಚೇತನ ಅಭ್ಯರ್ಥಿಗಳು: 35 ರೂ

ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ.

ಸಾಮಾನ್ಯ ಅಭ್ಯರ್ಥಿಗಳು: 635 ರೂಪಾವತಿ

ವಿಧಾನ: ಆನ್‌ಲೈನ್.

ಆಯ್ಕೆಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಆಗಸ್ಟ್​​ 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿಸ್ತರಣೆಗೊಂಡ ಕೊನೆಯ ದಿನಾಂಕ: 13 ಸೆಪ್ಟೆಂಬರ್​​ 2022

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ-ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

Share

Leave a Reply

Your email address will not be published.

WhatsApp
Follow by Email