ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ)ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆಯನ್ನು ಬರೆಯಬಹುದು. ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ upsc.gov.in ಗೆ ಭೇಟಿ ನೀಡಬಹುದು.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್ ನೋಡಿ: www.upsc.gov.in