ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಸರ್ಕಾರ ಅಧೀನದ ವಿವಿಧ 5 ಇಲಾಖೆಗಳ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆ ಹುದ್ದೆಗಳು ಯಾವುವು, ಹುದ್ದೆಗಳ ಸಂಖ್ಯೆ, ಅರ್ಜಿಗೆ ದಿನಾಂಕಗಳು, ವಿದ್ಯಾರ್ಹತೆಗಳೇನು ಎಂದು ಇಲ್ಲಿ ತಿಳಿಸಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಈ 5 ಇಲಾಖೆಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಸದರಿ ಹುದ್ದೆಗಳ ವಿವರ, ಅರ್ಜಿಗೆ ದಿನಾಂಕಗಳು, ವಿದ್ಯಾರ್ಹತೆ, ಇತರೆ ಮಾಹಿತಿಗಳು ಈ ಕೆಳಗಿನಂತಿವೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ನೇಮಕಾತಿಉದ್ಯೋಗ ಇಲಾಖೆ : ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ
ಇಲಾಖೆಹುದ್ದೆ ಹೆಸರು : ಸಹಾಯಕ ಕಾರ್ಯಪಾಲಕ ಅಭಿಯಂತರರು
ಕೊನೆ ದಿನಾಂಕ: 17-10-2022 ಶುಲ್ಕವನ್ನು ಪಾವತಿಸಲು ಕೊನೆಯ
ದಿನಾಂಕ: 18-10-2022