ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ತುಟ್ಟಿಭತ್ಯೆ ಹೆಚ್ಚಿಸಿದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ‘ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 3.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1,282.72 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಕೂಡ ತನ್ನ ನೌಕರರಿಗೆ ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು.

Share

WhatsApp
Follow by Email