ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ; ಹಿಜಾಬ್ ಧರಿಸಿ ಬರುವಂತಿಲ್ಲ.

ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ; ಹಿಜಾಬ್ ಧರಿಸಿ ಬರುವಂತಿಲ್ಲ.

puc hijab
puc exam 2023

ಸದ್ಯದಲ್ಲೇ ಪಿಯುಸಿ ಪರೀಕ್ಷೆ ನಡೆಯಲಿದೆ ಈ ಪರೀಕ್ಷೆ ಸಂದರ್ಭದಲ್ಲಿ ಯಾರೂ ಕೂಡಾ ಹಿಜಾಬ್​​ ಧರಿಸಿ ಪರೀಕ್ಷೆ ಬರೆಯಬಾರದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಹೇಳಿದ್ದಾರೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

‘ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. 

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ಈ ಹಿಂದೆ ಕೋರ್ಟ್​​ ತಿಳಿಸಿದೆ ಮತ್ತೆ ಈ ವಿಚಾರ ಬೇಡ ಎಂದು ತಿಳಿಸಿದ್ದಾರೆ. 

ಪರೀಕ್ಷೆಗೆ ವಿದ್ಯಾರ್ಥಿಗಳೆಲ್ಲರೂ ನಿಗದಿ ಪಡಿಸಿರುವಂತ ಸಮವಸ್ತ್ರ ಧರಿಸಿಯೇ ಹಾಜರಾಗ ಬೇಕು ಎಂದು ತಿಳಿಸಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. 

ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳು ಎಲ್ಲಾ ಚಿಂತೆ ಬಿಟ್ಟು ಸರಿಯಾಗಿ ಓದಿ ಹೆಚ್ಚಿನ ಅಂಕಗಳಿಸಲು ಸೂಚಿಸಲಾಗಿದೆ. ಸರಿಯಾದ ಸಮಯಕ್ಕೆ ಸಮವಸ್ತ್ರತೊಟ್ಟು ಹಾಜರಾಗುವುದು ಮುಖ್ಯವಾಗುತ್ತದೆ. 

Share
WhatsApp
Follow by Email