ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಭಾರಿ ಮುಖ್ಯ ಶಿಕ್ಷಕನ ಬಂಧನ

ಕಲಬುರಗಿ,ಸೆ.4: ವಿದ್ಯಾರ್ಥಿನಿಯರಿಗೆ ಮತ್ತು ಅತಿಥಿ ಶಿಕ್ಷಕಿಗೆ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪೋಲಿಸ್ ಠಾಣೆಯಲ್ಲಿ ವರದಿಯಾಗಿದೆ.
ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಮೈ ಮುಟ್ಟುವುದು ಮಾಡುತ್ತಿದ್ದ. ನಾನು ನಿಮ್ಮ ಸೋದರ ಮಾವ, ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತೆ ಹೇಳುತ್ತಿದ್ದ. ಅತಿಥಿ ಶಿಕ್ಷಕಿಗೂ ಸಹ ಆತ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿಸಲಾಗಿದೆ.
ಈ ಕುರಿತು ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳೂ ಸಹ ವಾಡಿ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಭಾರಿ ಮುಖ್ಯ ಗುರುಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

Share
WhatsApp
Follow by Email