Prahlad Joshi expressed outrage against Congress party Karnataka Congress Karnataka government
ಕಾಂಗ್ರೇಸ್‌ ವಿರುದ್ಧ ಪ್ರಹ್ಲಾದ್‌ ಜೋಶಿ ಆಕ್ರೊಶ!

ಕಾಂಗ್ರೇಸ್‌ ವಿರುದ್ಧ ಪ್ರಹ್ಲಾದ್‌ ಜೋಶಿ ಆಕ್ರೊಶ!

Prahlad joshi

ಮಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರ ವಿರುದ್ಧ ತೀವ್ರ ಆರೋಪಗಳಿವೆ. ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯದ ಕಾಂಗ್ರೆಸ್ ಸರಕಾರದ ಹೆಗ್ಗುರುತಾಗಿದೆ. ಕಟಾಕಟ್ ಹೇಳಿದವರು ಕಟಾಕಟ್ ಆಗಿ ಹಣವನ್ನು ಹೇಗೆ ನುಂಗಿಕೊಳ್ಳುವುದು ಎಂದು ಕರ್ನಾಟಕದಲ್ಲಿ ತೋರಿಸಿಕೊಟ್ಟಿದ್ದಾರೆ. ಇದರ ವಿರುದ್ಧ ಹೋರಾಟವನ್ನು ಬಿಜೆಪಿ ಖಂಡಿತಾ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

Priyank karge

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಪ್ರಿಯಾಂಕ್ ಖರ್ಗೆಯವರಷ್ಟು ದುರಹಂಕಾರದಿಂದ ವರ್ತಿಸಿರಲಿಲ್ಲ. ಆದರೆ, ಪ್ರಿಯಾಂಕ್ ಖರ್ಗೆಗೆ ಈಗಾಗಲೇ ದುರಹಂಕಾರ ತಲೆಗೇರಿದೆ. ಅವರ ದುರಹಂಕಾರದ ವರ್ತನೆಗೆ ಜನರು ಸೂಕ್ತ ಉತ್ತರ ಕೊಡಲಿದ್ದಾರೆ. ಅವರ ವರ್ತನೆಯ ಕಾರಣದಿಂದಲೇ ಮಲ್ಲಿಕಾರ್ಜುನ ಖರ್ಗೆಯವರು 2019ರಲ್ಲಿ ಸೋತಿರುವುದನ್ನು ಅವರು ನೆನಪಿಟ್ಟುಕೊಳ್ಳಲಿ ಎಂದು ಟಾಂಗ್‌ ಕೊಟ್ಟರು.

ಪ್ರಿಯಾಂಕ್ ಖರ್ಗೆ ಸಾರ್ವಜನಿಕ ಬದುಕಿನ ಎಲ್ಲಾ ಮಟ್ಟವನ್ನು ಮೀರಿದವರು. ಅವರು ಎಷ್ಟು ಕೆಳಗಿಳಿಯಲು ಬೇಕಾದರೂ ಸಿದ್ಧರಿದ್ದಾರೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುತ್ತಾರೆ ಎಂಬ ನಿರೀಕ್ಷೆ ನಮಗಿಲ್ಲ. ಆದ್ದರಿಂದ ಜನರನ್ನು ಜಾಗೃತಿ ಮಾಡಲು ನಾವು ಹೋರಾಟ ಮುಂದುವರೆಸುತ್ತೇವೆ ಎಂದರು.

Share
WhatsApp
Follow by Email