ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ

ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆಯುತ್ತಿರುವ ನಡುವೆ, ಬೆಂಗಳೂರಿನ ಅಲುಮ್ನಿ ಹಾಲ್‌ನಲ್ಲಿ ಸಾಹಿತಿಗಳು ಮತ್ತು ಚಿಂತಕರು ಗುರುವಾರ ಸಭೆ ನಡೆಸಿದರು. ಸಭೆಯಲ್ಲಿ ಚಿಂತಕರಾದ ಶಿವಶಂಕರ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ನಟ ಚೇತನ್ ಅಹಿಂಸಾ ಸೇರಿದಂತೆ ಹಲವರು ಭಾಗವಹಿಸಿದರು.

ಸಭೆಯಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ದೌರ್ಜನ್ಯ, ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್ ಮತ್ತು ಹೋರಾಟಗಾರರ ಬಂಧನ ಪ್ರಕರಣಗಳ ಕುರಿತು ಚರ್ಚಿಸಲಾಯಿತು.

ಇದೇ ವೇಳೆ, ಧರ್ಮಸ್ಥಳ ಪ್ರಕರಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಧರ್ಮಸ್ಥಳ ವಿರುದ್ಧ AI ವಿಡಿಯೋ ಮಾಡಿ ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದರು. ಆಗಸ್ಟ್ 19ರಂದು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿದ್ದು, ನ್ಯಾಯಾಲಯವು ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದಾರೆ.

ಈ ಬೆಳವಣಿಗೆಗಳ ನಡುವೆ ಬೆಂಗಳೂರಿನಲ್ಲಿ ನಡೆದ ಸಾಹಿತಿಗಳು ಮತ್ತು ಚಿಂತಕರ ಸಭೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Share
WhatsApp
Follow by Email