ರಕ್ಷಣೆ ಕೋರಿ ಬಂದ ಮಹಿಳೆಗೆ ಕಛೇರಿಯಲ್ಲಿ ಲೈಂಗಿಕ ದೌರ್ಜನ್ಯ

ತುಮಕೂರು : ರಕ್ಷಣೆ ಕೋರಿ ಬಂದ ಮಹಿಳೆಗೆ ಕಛೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಡಿವೈಎಸ್ಪಿ!!

ಹೌದು! ದೂರು ನೀಡಲು ಬಂದ ಮಹಿಳೆಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಎಂಬುವವರು ಪಾವಗಡದಿಂದ ಜಮೀನು ತಕರಾರಿನ ಬಗ್ಗೆ ಮಹಿಳೆಯೊಬ್ಬರು ಕಚೇರಿಗೆ ಬಂದಿದ್ದರು. ಈ ವೇಳೆ ಕಚೇರಿಯ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ದಚಟುವಟಿಕೆ ನಡೆಸಿದ್ದಾರೆ ಎನ್ನಲಾಗಿದೆ.

ಡಿವೈಎಸ್ಪಿ ರಾಮಚಂದ್ರಪ್ಪನವರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವೊಂದನ್ನು ವ್ಯಕ್ತಿಯೊಬ್ಬರು ಕಿಟಕಿಯಿಂದ ರೆಕಾರ್ಡ್ ಮಾಡಿದ್ದಾರೆ. ಇದೀಗ ಅಧಿಕಾರಿಯ ರಾಸಲೀಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ

ಬೆಂಗಳೂರು : ಕಾಂಗ್ರೆಸ್​ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಹಂಚಿಕೊಂಡಿದ್ದಾರೆ. ಕಾರಣ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಜನ ಸಚಿವರು ಮತ್ತು 35 ಶಾಸಕರು ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಅದನ್ನು ಕಂಡು ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಡಿಕೆಶಿ ಅಬ್ಬರ ಮಾಧ್ಯಮಗಳ ಮುಂದೆ ಮಾತ್ರವೇ: ಅಶೋಕ್ ಪ್ರಶ್ನೆ ಮಾಡಿದ್ದಾರೆ.


‘ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಎಂದು ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ’ ಎಂದು ಅಶೋಕ್ ಕುಹಕವಾಡಿದ್ದಾರೆ. ಹಾಗೆಯೇ ಸೂಕ್ಶ್ಮ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ರಾತ್ರಿ ನಡೆದ ಸಿದ್ದರಾಮಯ್ಯ ಬಣದ ಡಿನ್ನರ್ ಮೀಟಿಂಗ್ ರಾಜಕೀಯ ವಲಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಎಲ್ಲದಕ್ಕೂ ಮಿಗಿಲಾಗಿ, ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಸಭೆ ಆಯೋಜಿಸಿದ್ದು ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ. ಇದರಮಧ್ಯೆಯೇ , ಊಹಾಪೋಹಗಳನ್ನು ಅಲ್ಲಗಳೆದಿರುವ ಸತೀಶ್ ಜಾರಕಿಹೊಳಿ ಹಾಗೂ ತಂಡ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟ ಮಾಡಲಾಗಿದೆ ಅಷ್ಟೆ ಎಂದು ಹೇಳಿಕೆ ನೀಡಿದೆ. ಒಟ್ಟಿನಲ್ಲಿ ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ನಡೆದ ಈ ಔತಣಕೂಟ ರಾಜ್ಯ ರಾಜಕೀಯ ಎಲ್ಲರ ಗಮನ ಸೆಳೆದಿರುವುದಂತೂ ನಿಜ.

ಕಾಂಗ್ರೇಸ್‌ ವಿರುದ್ಧ ಪ್ರಹ್ಲಾದ್‌ ಜೋಶಿ ಆಕ್ರೊಶ!

Prahlad joshi

ಮಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರ ವಿರುದ್ಧ ತೀವ್ರ ಆರೋಪಗಳಿವೆ. ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯದ ಕಾಂಗ್ರೆಸ್ ಸರಕಾರದ ಹೆಗ್ಗುರುತಾಗಿದೆ. ಕಟಾಕಟ್ ಹೇಳಿದವರು ಕಟಾಕಟ್ ಆಗಿ ಹಣವನ್ನು ಹೇಗೆ ನುಂಗಿಕೊಳ್ಳುವುದು ಎಂದು ಕರ್ನಾಟಕದಲ್ಲಿ ತೋರಿಸಿಕೊಟ್ಟಿದ್ದಾರೆ. ಇದರ ವಿರುದ್ಧ ಹೋರಾಟವನ್ನು ಬಿಜೆಪಿ ಖಂಡಿತಾ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

Priyank karge

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಪ್ರಿಯಾಂಕ್ ಖರ್ಗೆಯವರಷ್ಟು ದುರಹಂಕಾರದಿಂದ ವರ್ತಿಸಿರಲಿಲ್ಲ. ಆದರೆ, ಪ್ರಿಯಾಂಕ್ ಖರ್ಗೆಗೆ ಈಗಾಗಲೇ ದುರಹಂಕಾರ ತಲೆಗೇರಿದೆ. ಅವರ ದುರಹಂಕಾರದ ವರ್ತನೆಗೆ ಜನರು ಸೂಕ್ತ ಉತ್ತರ ಕೊಡಲಿದ್ದಾರೆ. ಅವರ ವರ್ತನೆಯ ಕಾರಣದಿಂದಲೇ ಮಲ್ಲಿಕಾರ್ಜುನ ಖರ್ಗೆಯವರು 2019ರಲ್ಲಿ ಸೋತಿರುವುದನ್ನು ಅವರು ನೆನಪಿಟ್ಟುಕೊಳ್ಳಲಿ ಎಂದು ಟಾಂಗ್‌ ಕೊಟ್ಟರು.

ಪ್ರಿಯಾಂಕ್ ಖರ್ಗೆ ಸಾರ್ವಜನಿಕ ಬದುಕಿನ ಎಲ್ಲಾ ಮಟ್ಟವನ್ನು ಮೀರಿದವರು. ಅವರು ಎಷ್ಟು ಕೆಳಗಿಳಿಯಲು ಬೇಕಾದರೂ ಸಿದ್ಧರಿದ್ದಾರೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುತ್ತಾರೆ ಎಂಬ ನಿರೀಕ್ಷೆ ನಮಗಿಲ್ಲ. ಆದ್ದರಿಂದ ಜನರನ್ನು ಜಾಗೃತಿ ಮಾಡಲು ನಾವು ಹೋರಾಟ ಮುಂದುವರೆಸುತ್ತೇವೆ ಎಂದರು.


WhatsApp
Follow by Email