ಬ್ರೇಕಿಂಗ್ ನ್ಯೂಸ್ ಮಳವಳ್ಳಿ : ಜಿಲ್ಲಾಧಿಕಾರಿ ಭೇಟಿ ಹಾಗೂ ಪರಿಶೀಲನೆ 06/04/202006/04/20201 min read admin ಮಳವಳ್ಳಿಗೆ ಜಿಲ್ಲಾಧಿಕಾರಿ ಭೇಟಿ ಹಾಗೂ ಪರಿಶೀಲನೆಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ. ವಿ. ವೆಂಕಟೇಶ್ ಅವರು ಇಂದು ಮಳವಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣಕ್ಕೆ ಬಂದು ಹೋಗಿರುವ ದೆಹಲಿ ಮೂಲದ ಮೌಲ್ವಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಳವಳ್ಳಿಯ ಸೋಂಕು ಹರಡಿರುವ ಸಾಧ್ಯತೆ ಇರುವುದರಿಂದ ಇಂದಿನಿಂದ ಮೂರು ಕೀಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಜೋನ್ ಎಂದು ಜಿಲ್ಲಾಧಿಕಾರಿ ಘೋಷಿಸಿದರು.ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 10 ಮಂದಿ ಧರ್ಮಗುರುಗಳು ಮಾರ್ಚ್ 23ರಿಂದ ಮಾರ್ಚ್ 30ರವರೆಗೂ ಮಳವಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಮತ್ತೆ ಮೈಸೂರಿಗೆ ತೆರಳುವಾಗ ಜಿಲ್ಲಾಡಳಿತ ಬನ್ನೂರಿನ ಬಳಿ ವಶಕ್ಕೆ ಪಡೆದು ಪ್ರತ್ಯೇಕ ವಾಸದಲ್ಲಿ ಇರಿಸಿತ್ತು.10 ಮಂದಿಯಲ್ಲಿ ಐವರಿಗೆ ಕೋವಿಡ್-19 ದೃಢಪಟ್ಟಿದ್ದು ಅವರು ಓಡಾಡಿರುವ ಜಾಗಗಳಲ್ಲಿ ಆತಂಕ ಎದುರಾಗಿದೆ. ಮಾರ್ಚ್ 24ರಂದು ಪ್ರಧಾನ ಮಂತ್ರಿ ಲಾಕ್ ಡೌನ್ ಘೋಷಣೆ ಮಾಡಿದ ವೇಳೆ ಈ ಧರ್ಮಗುರುಗಳು ಮಳವಳ್ಳಿ, ವಾರ್ಡ್ ನಂಬರ್ 7 ರಲ್ಲಿರುವ ಈದ್ಗಾ ಮೊಹಲ್ಲಾದಲ್ಲಿರುವ ಮಸೀದಿಯಲ್ಲಿ ತಂಗಿದ್ದರು. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದುಗೊಳಿಸಿದ ನಂತರ ಅವರು ಮಸೀದಿ ಪಕ್ಕದ ಕೊಠಡಿಗೆ ಸ್ಥಳಾಂತರಗೊಂಡರು. ನಂತರವೂ ಅವರು ಧಾಮರ್ಿಕ ಚಟುವಟಿಕೆ ಮುಂದುವರಿಸಿದ್ದರು. ಹೀಗಾಗಿ ಅವರ ಜೊತೆ ಸಂಪರ್ಕದಲ್ಲಿದ್ದ 36 ಮಂದಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಅವರಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ಆದರೂ ಅವರ ಮೇಲೆ ನಿಗಾ ವಹಿಸಲಾಗಿದೆ. ಅವರಲ್ಲಿ 7 ಮಂದಿಯ ಗಂಟಲು ದ್ರವ, ರಕ್ತ ಮಾದರಿಯನ್ನು ಪ್ರಯೋಗಶಾಲೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದೇವೆ ಎಂದು ಹೇಳಿದರು.ಕೊರೊನಾ ಸೋಂಕು ಹರಡುವ ಸಾಧ್ಯತೆಯಿಂದಾಗಿ ಮೂರು ಕೀಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಜೋನ್ ಆಗಿ ಘೋಷಿಸಿದ್ದು, ಈ ವ್ಯಾಪ್ತಿಯಲ್ಲಿ ನುಮತಿಯಿಲ್ಲದೆ ಯಾವುದೇ ವ್ಯಕ್ತಿಯ ಓಡಾಟ ಇರುವುದಿಲ್ಲ, ಮುಂದಿನ 28 ದಿನಗಳ ಕಾಲ ಈ ಪ್ರದೇಶವನ್ನು ತೀವ್ರ ನಿಗಾ ಘಟಕವಾಗಿ ಪರಿಗಣಿಸುತ್ತದೆ. ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಹಣ್ಣು-ಹಂಪಲು, ತರಕಾರಿ ವಿತರಣೆ ಸೇರಿದಂತೆ ಜೀವನ ಅವಶ್ಯಕವಾದ ವಸ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುವುದು ಅಲ್ಲದೇ 7 ಕೀ.ಮೀ. ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಪರಿಗಣಿಸಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.ತಾಲ್ಲೂಕಿನ 2.84000 ಜನಸಂಖ್ಯೆ ಇದೆ, 170 ಆರೋಗ್ಯ ತಂಡ ರಚಿಸಿದ್ದು, ಪ್ರತಿ 50 ಮನೆಗಳಿಗೆ ಇಬ್ಬರು ನೋಡೆಲ್ ಅಧಿಕಾರಿ ನೇಮಕ ಮಾಡಿ ಅಲ್ಲಿನ ನಿವಾಸಿಗಳ ಆರೋಗ್ಯ ತಪಾಸಣೆ ನಡೆಸಿ ಮುನ್ನೆಚ್ಚರಿಕೆ ವಹಿಸಲಾಗುವುದು ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶ್ರಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ಸೂರಜ್, ಅಪಾರ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ತಹಶೀಲ್ದಾರ್ ಕೆ.ಚಂದ್ರಮೌಳಿ, ಡಿವೈಎಸ್ ಪಿ ಎಂ.ಜೆ.ಪೃಥ್ವಿ, ತಾ.ಪಂ.ಇಒ ಬಿ.ಎಸ್.ಸತೀಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ್, ಸಿಪಿಐ ಧಮೇಂದ್ರ, ಪಿಐ ರಮೇಶ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.ವರದಿ :ಕೃಪಸಾಗರ್ ಗೌಡ Share