ಬ್ರೇಕಿಂಗ್ ನ್ಯೂಸ್ ಕೊರೋನಾ ವೈರಸ್ ಗಂಭೀರ ಸ್ಥಿತಿ: ಹಿರೇಬಾಗೇವಾಡಿಯಲ್ಲಿ ತುರ್ತು ಸಭೆ ನಡೆಸಿದ ಶಾಸಕಿ ಹೆಬ್ಬಾಳಕರ್ 15/04/202015/04/20201 min read admin ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ನಾಲ್ಕು ಜನರಲ್ಲಿ ಕೊರೋನಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತುರ್ತು ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ರೋಗ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅವರು, ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದರು. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ತಮ್ಮ ಆರೋಗ್ಯದ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ರೀತಿಯ ಭಯ ಪಡದೇ ಚಿಕಿತ್ಸೆಗೆ ಸಹಕರಿಸಬೇಕು. ಎಲ್ಲರ ಸಹಕಾರವಿದ್ದರೆ ಮಾತ್ರ ಈ ಮಹಾ ಮಾರಿ ಕೊರೊನಾ ವೈರಸ್ ನ್ನು ಹೊಡೆದೋಡಿಸಬಹುದು. ಕ್ವಾರಂಟೈನ್ ನಲ್ಲಿ ಇರುವ ಜನರು ಅನಾವಶ್ಯಕವಾಗಿ ಇತರರೊಂದಿಗೆ ಬೆರೆಯದೆ ತಮ್ಮ ಆರೋಗ್ಯದ ಬಗ್ಗೆ ನಿಗಾವಹಿಸಬೇಕು ಎಂದು ಹೆಬ್ಬಾಳಕರ್ ವಿನಂತಿಸಿದರು. ಈಗಾಗಲೆ ಗ್ರಾಮದಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿರುವದರಿಂದ ಜ ಹೆಚ್ಚು ಕಾಳಜಿ ತೆಗೆದುಕೊಳ್ಳಬೇಕು. ನಿಮ್ಮ ಸಹಕಾರವೇ ಊರಿಗೆ ಉಪಕಾರವಾಗಿದೆ. ನಿಮ್ಮ ಹಾಗೂ ಕುಟುಂಬದವರ ಆರೋಗ್ಯವನ್ನು ಕಾಪಾಡಿಕೊಂಡು ಸಾಮಾಜಿಕ ಅಂತರವನ್ನು ಯಾವಾಗಲೂ ಕಾಯ್ದುಕೊಂಡು ಹೋಗಬೇಕು ಎಂದು ಅವರು ಹೇಳಿದರು.ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಯಾವುದೇ ಸಹಕಾರ ಬೇಕಾದರೂ ಕೊಡಲು ಸಿದ್ದ ಎಂದು ಅಧಿಕಾರಿಗಳಿಗೆ ತಿಳಿಸಿದ ಲಕ್ಷ್ಮಿ ಹೆಬ್ಬಾಳಕರ್, ಸರಕಾರದ ಮಟ್ಟದಲ್ಲಿ ಆಗಬೇಕಿರುವ ಕೆಲಸಗಳಿದ್ದರೂ ಮಾಹಿತಿ ನೀಡಬೇಕು ಎಂದರು. ಟಾಸ್ಕ್ ಫೋರ್ಸ್ ಅಧ್ಯಕ್ಷ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಂ ನಸ್ಲಾಪುರೆ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು. ಕಾರ್ಯಕರ್ತೆಯರ ತ್ಯಾಗ, ಸೇವೆ ಶ್ಲಾಘನೆಇದೇ ವೇಳೆ, ವಿವಿಧೆಡೆ ಭೇಟಿ ನೀಡಿ ಕೊರೋನಾ ವೈರಸ್ ಹರಡದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಲಕ್ಷ್ಮಿ ಹೆಬ್ಬಾಳಕರ್, ಕೊರೊನಾ ವೈರಸ್ (Covid19) ಮಹಾ ಮಾರಿಯ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣಗಳನ್ನು ಪಣಕಿಟ್ಟು ಹೋರಾಡುತ್ತಿರುವ ಅಕ್ಕ, ತಂಗಿಯರ ಸ್ವರೂಪದಂತಿರುವ ಅಂಗನವಾಡಿ ಕಾರ್ಯಕರ್ತೆಯರು, ನರ್ಸ್ ಹಾಗೂ ಆಶಾ ಕಾರ್ಯಕರ್ತರ ತ್ಯಾಗ ನಿಜಕ್ಕೂ ಶ್ಲಾಘನೀಯ ಎಂದು ಪ್ರಶಂಸಿಸಿದರು.ನಿಮ್ಮ 24/7 ಸೇವೆ ಹಾಗೂ ಅಗತ್ಯದ ಸಮಯದಲ್ಲಿ ಈ ಕೊರೊನಾ ವಿರುದ್ಧ ಜನತೆಯಲ್ಲಿ ಜಾಗೃತಿಯನ್ನು ಮೂಡಿಸುವುದು, ಪ್ರತಿಯೊಂದು ಗ್ರಾಮದ ಗಲ್ಲಿ ಗಲ್ಲಿಗಳಿಗೆ ಹೋಗಿ ಸರ್ವೇ ಮಾಡುವುದು, ಜನರಿಗೆ ಮುಂಜಾಗ್ರತೆಯ ಕ್ರಮಗಳನ್ನು ತಿಳಿಸಿ ಹೇಳುವುದು ಒಟ್ಟಾರೆ ದೇಶಕ್ಕೆ ನಿಮ್ಮ ಸೇವೆ ಅಮೋಘವಾಗಿದೆ ಎಂದು ಹೇಳಿದರು.ಈ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ನಿಮ್ಮಲ್ಲರ ಪಾತ್ರ ಮಹತ್ತರವಾಗಿದ್ದು, ನಿಮ್ಮೆಲ್ಲರಿಗೂ ಕೋಟಿ ಕೋಟಿ ಧನ್ಯವಾದಗಳು. ನಿಮ್ಮ ಸೇವೆ ಸದಾಕಾಲವೂ ಹೀಗೆಯೇ ಮುಂದುವರೆಯಲಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದರು. Share