ರಬಕವಿ-ಬನಹಟ್ಟಿ ತಾಲೂಕಿನಲ್ಲಿ ದ್ವಿಚಕ್ರ ವಾಹನ ಸಂಚಾರ ಸಂಪೂರ್ಣ ಬಂದ್

ರಬಕವಿ-ಬನಹಟ್ಟಿ ತಾಲೂಕಿನಲ್ಲಿ ದ್ವಿಚಕ್ರ ವಾಹನ ಸಂಚಾರ ಸಂಪೂರ್ಣ ಬಂದ್

ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ತಾಲೂಕಿನ ವ್ಯಾಪ್ತಿಯಲ್ಲಿ ಕೋರೊನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮವಾಗಿ ಎಲ್ಲ ದ್ವಿಚಕ್ರ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ.
ರಬಕವಿ-ಬನಹಟ್ಟಿ ತಾಲೂಕಿನ ವ್ಯಾಪ್ತಿಯಲ್ಲಿ ಕೋರೊನಾ ವೈರಸ್ ಹರಡದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶದಂತೆ ಕಲಂ ೧೪೪ ಸಿಆರ್‌ಪಿಸಿ ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಸಹಿತ ತಾಲೂಕಿನಲ್ಲಿ ಸಾರ್ವಜನಿಕರು ವಿನಾಕಾರಣ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವುದು ಹೆಚ್ಚಾಗಿ ಕಂಡು ಬಂದಿದೆ. ಅದಕ್ಕಾಗಿ ಲಾಕ್‌ಡೌನ್ ಮುಗಿಯವರೆಗೂ ತಾಲೂಕಿನಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ವೈದ್ಯಕೀಯ ಸೇವೆ ಹಾಗೂ ಸರಕಾರಿ ಸೇವೆಗಾಗಿ ಸಂಚರಿಸುವ ವಾಹನಗಳನ್ನು ಬಿಟ್ಟು ಉಳಿದೆಲ್ಲ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ ಪ್ರಶಾಂತ ಚನಗೊಂಡ ಹೇಳಿದ್ದಾರೆ.
Share
WhatsApp
Follow by Email