ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ.

ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅನುಮೋದನೆ.

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 5 ರಿಂದ 7ಕ್ಕೆ ಏರಿಸಲು  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನೇತೃತ್ವದ ಸಚಿವ  ಸಂಪುಟ ಸಮಿತಿ ಅನುಮತಿಸಿದೆ.

read this : ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಸಾಫ್ಟ್‌ವೇರ್‌ ಎಂಜಿನಿಯರ್ ಬಂಧನ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ವರದಿಯನ್ನು ಉಭಯ ಸದನಗಳ ಮುಂದೆ ಮಂಡಿಸಿ ಅಂಗೀಕಾರ ಪಡೆಯಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತೇವೆ. ಅಲ್ಲಿಂದ ಅನುಮತಿ ದೊರೆತ ನಂತರ ಮೀಸಲಾತಿ ಹೆಚ್ಚಳ ಜಾರಿಗೆ ಬರುತ್ತದೆ ಎಂದು ವಿವರಿಸಿದರು.

Read this : ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಮುಂದೆ ‘ಒಡೆಯರ್‌’ ಎಕ್ಸ್‌ಪ್ರೆಸ್ !

ಈ ಸಂಬಂಧ ನಿನ್ನೆ ಸರ್ವಪಕ್ಷಗಳ ಸಭೆ ನಡೆದಿತ್ತು. ಅಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ವಾನುಮತದ ಅನುಮೋದನೆ ದೊರೆತಿತ್ತು ಎಂಬುದನ್ನು ಸ್ಮರಿಸಬಹುದು.

Share
WhatsApp
Follow by Email