ರಾಜ್ಯದಲ್ಲಿ ಬಸ್ ಟಿಕೇಟ್ ದರ ಏರಿಕೆ ಕುರಿತು ಕೇಂದ್ರ ಸಚಿವ HD ಕುಮಾರಸ್ವಾಮಿಯವರ ನಿಲುವು

ರಾಜ್ಯದಲ್ಲಿ ಬಸ್ ಟಿಕೇಟ್ ದರ ಏರಿಕೆ ಕುರಿತು ಕೇಂದ್ರ ಸಚಿವ HD ಕುಮಾರಸ್ವಾಮಿಯವರ ನಿಲುವು

KSRTC BUS

ಇತ್ತೀಚೆಗೆ ಬಸ್ ಟಿಕೇಟ್ ದರ ಏರಿಕೆಯಾಗಿದ್ದು ಅದರ ಕುರಿತು ಹೆಚ್ಚು ಹೆಚ್ಚು ಚರ್ಚೆಗಳು ನಡೆಯುತ್ತಲಿವೆ.

ಹಾಗೆಯೇ ಈಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅವರ ನಿಲುವನ್ನು ವ್ಯಕ್ತ ಪಡಿಸಿದ್ದಾರೆ.

ಸಾರ್ವಜನಿಕರಿಗೆ ಆಗುವ ತೊಂದರೆಯ ಕುರಿತು ಹೇಳಿಕೆ ನೀಡಿದ್ದಾರೆ

H D Kumaraswamy

ಸರ್ಕಾರಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಿ, ಬಡವರ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಆದರೆ, ಜನರಿಂದಲೇ ಕಿತ್ತುಕೊಂಡು ಅವರಿಗೆ ಕೊಡುವ ಕೆಲಸ ಮಾಡಬಾರದು. ಅತ್ತೆಯ ಆಸ್ತಿಯನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಜನರಿಂದ ಕಿತ್ತುಕೊಂಡು ಅವರಿಗೆ ಕೊಡುವುದಕ್ಕೆ ಇವರೇ ಬೇಕಾ? ಎಂದು ಹೆಚ್​​​ಡಿ ಕುಮಾರಸ್ವಾಮಿ ಪ್ರಶ್ನಿಸಿದರು

Share

Leave a Reply

Your email address will not be published.

WhatsApp
Follow by Email