Skip to content
You are Here Home 2020 March 26 ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ದ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಂಗಳೂರು : ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ವಿರುದ್ದ ಕ್ರಮ ಕೈಗೊಳ್ಳಬೇಕು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್ ಕೋವಿಡ್ -19 ಗಾಗಿ ಮೀಸಲಿಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಇಂದು ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಡಿಎಚ್ಓಗಳ ಜತೆಗೆ ವಿಡಿಯೋ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಕೊರೋನಾ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಮುಖ್ಯಮಂತ್ರಿ ಗಳ ವಿಡಿಯೋ ಕಾನ್ಪೆರೆನ್ಸ್ ನ ಮುಖ್ಯಾಂಶಗಳು : ಮಾನ್ಯ ಪ್ರಧಾನ ಮಂತ್ರಿ ಅವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಲಾಕ್ ಡೌನ್ ಮೀರಿ ಹೊರಬರುವವರನ್ನು ಬಂಧನ ಮಾಡುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲೆಯ ಬಾರ್ಡರ್ ಗಳನ್ನು ಸೀಲ್ ಮಾಡುವಂತೆ ಸೂಚನೆ ನೀಡಲಾಗಿದೆ. ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಡಿಸ್ಟಲರಿ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದೆ. ಕೆಲವು ಕಂಪನಿಗಳ ಉಚಿತವಾಗಿ ನೀಡಲು ಮುಂದೆ ಬಂದಿವೆ. ಅದರ ಸದಾವಕಾಶ ಬಳಸಿಕೊಳ್ಳಲು ಸೂಚನೆ ನೀಡಲಾಯಿತು. ನಿಮ್ಮ ಏನೇ ಸಮಸ್ಯೆ ಇದ್ದರು ಕೂಡಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು ಅಂತ ಸೂಚನೆ ನೀಡಲಾಯಿತು. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್ ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್ ಕೋವಿಡ್ ಗಾಗಿ ಮೀಸಲಿಡುವಂತೆ ಸೂಚನೆ ನೀಡಲಾಯಿತು. ವೈದ್ಯರು ಮತ್ತು ನರ್ಸ್ ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಪಾಸ್ ಇದ್ದವರು ತುರ್ತು ಕೆಲಸ ಇದ್ದವರಿಗೆ ಮಾತ್ರ ಹೊರಗಡೆ ಹೋಗಲು ಅವಕಾಶ. ಡಿಸಿಎಂ ಗಳಾದ ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್, ಸಚಿವರಾದ ಅಶೋಕ್, ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಿದ್ದರು
Post navigation